ದಾವಣಗೆರೆ: 2023 -24ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳವರೆಗೆ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್‌ನಿಂದ 2024ರ ಮಾರ್ಚ್ ವರೆಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯ ವಲಯ ದಾವಣಗೆರೆ ಇಲಾಖಾ
ವೆಬ್‌ಸೈಟ್‌ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಮೇ22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ
ದಾವಣಗೆರೆ ದೂ.ಸಂ: 08192-230049ನ್ನು
ಸಂಪರ್ಕಿಸಬಹುದು ಎಂದು ತೋಟಗಾರಿಕೆ
ಉಪನಿರ್ದೇಶಕರು ತಿಳಿಸಿದ್ದಾರೆ.



