ದಾವಣಗೆರೆ: ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಹರ ತಾಲೂಕಿನ ದೀಟೂರು ಗ್ರಾಮದಲ್ಲಿ ನಡೆದಿದೆ.
ದೀಟೂರು ಗ್ರಾಮದ ಎಲ್.ಕೆ. ಸುರೇಶ್ (42) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಸಾರಥಿ ಗ್ರಾಮದ ಯೂನಿಯನ್ ಬ್ಯಾಂಕಿನಲ್ಲಿ 21 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಸಾಲವನ್ನು ತೀರಿಸಲಾಗದೆ, ಮನನೊಂದು ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಈ ಬಗ್ಗೆ ಸುರೇಶ್ ಪತ್ನಿ ಎಲ್.ಎಸ್. ಕಲ್ಪನಾ ಹರಿಹರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.