ದಾವಣಗೆರೆ: ಸಾಲಭಾದೆಯಿಂದ ಜಿಲ್ಲೆಯ ಜಗಳೂರು ತಾಲ್ಲೂಕಿನ ಕೆಚ್ಚೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಂಜಪ್ಪ (45) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಆರು ವರ್ಷದ ಹಿಂದೆ 3 ಎಕರೆ ಜಮೀನಿನನಲ್ಲಿ ದಾಳಿಂಬೆ ಬೆಳೆಯಲು ಬ್ಯಾಂಕ್ ಹಾಗೂ ಖಾಸಗಿಯಾಗಿ 7 ಲಕ್ಷ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹಿಡಿಯದ ಹಿನ್ನೆಲೆ ಸಾಲ ಭಾದೆ ತಾಳಲಾರದೇ ಹೊಲದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅವರ ಪುತ್ರ ಜಗಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



