ದಾವಣಗೆರೆ: ಮೆಳ್ಳೆಕಟ್ಟೆ, ಅಣಜಿ ಮತ್ತು ಲಿಂಗಾಪುರ ಗ್ರಾಮದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದ್ದು, ಅಣಜಿ ಸರ್ಕಲ್ ಬಳಿ ರೈತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ 1,156 ಎಕರೆ ಭೂಮಿ ಸ್ವಾಧೀನಕ್ಕೆ ಕರ್ನಾಟಕ ಕೈಗಾರಿಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಂದಾಗಿದೆ. ಈ ಬಗ್ಗೆ 258 ರೈತರಿಗೆ ಕೆಐಎಡಿಬಿ ನೋಟಿಸ್ ನೀಡಿದೆ. ಇದರಿಂದ ಆತಂಕಗೊಂಡ ರೈತರು ಫಲವತ್ತದ ಭೂಮಿ ಕೊಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು.
ಮೆಳ್ಳೆಕಟ್ಟೆ, ಅಣಜಿ, ಲಿಂಗಾಪುರ ವ್ಯಾಪ್ತಿಯಲ್ಲಿನ ಭೂಮಿ ಫಲವತ್ತಾಗಿದೆ. ಮೆಕ್ಕೆಜೋಳ, ಊಟದ ಜೋಳ, ಅಡಿಕೆ ಸಹಿತ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಈ ಭೂಮಿಯನ್ನು ರೈತರು ಕಳೆದುಕೊಂಡರೆ ಯಾರಿಗೂ ಭೂಮಿಇರುವುದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಒಂದು ವಾರದಿಂದ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರ ಈ ಯೋಜನೆಗೆ ಭೂ ಸ್ವಾಧೀನ ಆದೇಶ ಹಿಂಪಡೆಯುವವರೆಗೆ ಹೋರಾಟ ಮುಂದುವರಿ
ಯಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಿಎಂಸಿ ಅಧ್ಯಕ್ಷ ಅಣಜಿ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್. ಬಸವಂತಪ್ಪ, ಮುಖಂಡರಾದ ಹನುಮಂತಪ್ಪ, ವೀರಭದ್ರಪ್ಪ, ಮಲ್ಲಿಕಾರ್ಜುನ, ಸಿ.ಟಿ. ಕುಮಾರ್, ರಾಜಶೇಖರ್, ಲಿಂಗರಾಜ್, ಶೋಭಾ, ಪವಿತ್ರ, ನವೀನ ಮತ್ತಿತರರು ಇದ್ದರು.



