ದಾವಣಗೆರೆ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಮತ್ತೊಮ್ಮೆ ಬೀದಿಗಿಳಿದು ಹೋರಾಟ ನಡೆಸಿದ್ದು, ಹೆದ್ದಾರಿ ತಡೆಗೆ ಮುಂದಾಗಿದ್ದಾರೆ. ಈ ನಡುವೆ ದಾವಣಗೆರೆಯಲ್ಲಿ ರೈತರು ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.47 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು
ದಾವಣಗೆರೆಯ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಕೇಂದ್ರ ಕೃಷಿ ಕಾಯ್ದೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅನ್ನದಾತರು ಈ ಪತ್ರವನ್ನು ಪ್ರಧಾನಿಗೆ ಪೋಸ್ಟ್ ಮಾಡಿದ್ದಾರೆ. ಇನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಹೆದ್ದಾರಿ ತಡೆ ನಡೆಸುತ್ತಿರುವ ರೈತರು ಕುರಿ, ಕೋಳಿ, ದನ ಕರುಗಳ ಸಮೇತವಾಗಿ ಹೆದ್ದಾರಿಗೆ ಬಂದು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿಯಲ್ಲಿ ಟ್ರ್ಯಾಕ್ಟರ್ ಜಾಥಾಗೆ ಕರೆ ನೀಡಿದ್ದ ಸಂಯುಕ್ತ ಕಿಸಾನ್ ಮೋರ್ಚಾ (40 ರೈತ ಸಂಘಟನೆಗಳ ಒಕ್ಕೂಟ) ಚಕ್ಕಾ ಜಾಮ್ ( ಹೆದ್ದಾರಿ ತಡೆ) ಹೋರಾಟಕ್ಕೆ ಕರೆ ನೀಡಿದ್ದು, ರಾಜ್ಯದಲ್ಲೂ ರೈತ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.