Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ

ದಾವಣಗೆರೆ

ದಾವಣಗೆರೆ: ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಸ್ಟ್ ತಿಂಗಳಲ್ಲಿ ರೈತರಿಗೆ ಪಶುಸಂಗೋಪನಾ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಸಕ್ತ ರೈತರು ಭಾಗವಹಿಸಬಹುದು.

ಆಗಸ್ಟ್-02 ಮತ್ತು 03 ರಂದು 25 ಜನರಿಗೆ ಕೋಳಿ ಸಾಕಾಣಿಕೆ ಬಗ್ಗೆ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ಹೆಚ್ಚಿನ ವಿವರಕ್ಕಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ, ದಾವಣಗೆರೆ ಇವರ ದೂರವಾಣಿ ಸಂಖ್ಯೆ: 08192-233787 ಗೆ ಸಂಪರ್ಕಿಸಬಹುದೆಂದು
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top