ದಾವಣಗೆರೆ: ಕೇಂದ್ರ ಸರ್ಕಾರ ಏಕಾಏಕಿ ರಸ ಗೊಬ್ಬರ ಬೆಲೆ ಏರಿಕೆ ಮಾಡಿರುವುದನ್ನು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ ಖಂಡಿಸಿದ್ದಾರೆ.
ಬೆಲೆ ಪ್ರತಿ ಕೆಜಿಗೆ 50 ರೂಪಾಯಿ ಏರಿಕೆಯಾಗಿದ್ದು ಇದರಿಂದ ರೈತರಿಗೆ ಹೊರೆಯಾಗಲಿದೆ. ಈಗಾಗಲೇ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ರೈತರಿಗೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ, ರಸ ಗೊಬ್ಬರ ಒಂದು ಕೆಜಿಗೆ 50 ರೂಪಾಯಿ ಏರಿಕೆ ಮಾಡಿರುವುದು ಸರಿಯಲ್ಲ ಎಂದರು.
ನೋಟ್ ಬ್ಯಾನ್ ಹಾಗೂ ಕೋವಿಡ್ ಸಂಕಷ್ಟದಿಂದ ಜನರು ಇನ್ನೂ ಹೊರಗಡೆ ಬಂದಿಲ್ಲ ಈ ನಡುವೆ ರೈತರು ಕೂಡ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈ ಮಧ್ಯೆ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಬೆಲೆ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಆಡಳಿತದ ಅನುಭವ ಕೊರತೆ ಎದ್ದು ಕಾಣುತ್ತಿದೆ ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿರುವುದರಿಂದ ಬೆಲೆ ಏರಿಕೆ ನಿಯಂತ್ರಿಸಲ ಸಾಧ್ಯವಾಗುತ್ತಿಲ್ಲ ಎಂದರು.
ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದೀಗ ರಸ ಗೊಬ್ಬರ ಬೆಲೆ ಏರಿಕೆಯಾಗಿರುವುದು ರೈತರಿಗೆ ಮತ್ತೊಷ್ಟು ಸಂಕಷ್ಟ ಎದುರಾಗಿದೆ ಎಂದರು. ಈಗಾಗಲೇ ರೈತರ ಸೂಕ್ತ ಬೆಲೆ, ಬೆಳೆ ಇಲ್ಲದೆ ಕಂಗಾಲಾಗಿದ್ದಾರೆ. ಇಂಥ ಸಂದರ್ಭದಲ್ಲಿ ಗೊಬ್ಬರ ಬೆಲೆ ಕೆಜಿಗೆ 50 ರೂಪಾಯಿ ಹೆಚ್ಚಾದರೆ ಖರೀದಿ ಮಾಡುವುದಾದರೂ ಹೇಗೆ..? ಒಂದು ಚೀಲಕಕ್ಕೆ ಕನಿಷ್ಠ 200 ರಿಂದ 300 ರೂಪಾಯಿ ಹೆಚ್ಚಳವಾಗುತ್ತದೆ. ರೈತರು ಸಾಲ ಮಾಡಿ ಉಳುಮೆ ಮಾಡುತ್ತಾರೆ ಇದೀಗ ರಸ ಗೊಬ್ಬರ ಬೆಲೆ ಕೂಡ ಹೆಚ್ಚಾದರೆ ಕೃಷಿ ಮಾಡುವುದಾದರೂ ಹೇಗೆ ಬಿಜೆಪಿ ಸರ್ಕಾರ ಕೂಡಲೇ ರಸ ಗೊಬ್ಬರ ಬೆಲೆ ಇಳಿಕೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.