Connect with us

Dvgsuddi Kannada | online news portal | Kannada news online

ದಾವಣಗೆರೆ: ಬರ ಪರಿಹಾರಕ್ಕೆ ಎಫ್ ಐಡಿ ನೋಂದಣಿ ಅಗತ್ಯ; ಕೃಷಿ ಸಚಿವ ಚಲುವರಾಯಸ್ವಾಮಿ

FB IMG 1700658801985

ದಾವಣಗೆರೆ

ದಾವಣಗೆರೆ: ಬರ ಪರಿಹಾರಕ್ಕೆ ಎಫ್ ಐಡಿ ನೋಂದಣಿ ಅಗತ್ಯ; ಕೃಷಿ ಸಚಿವ ಚಲುವರಾಯಸ್ವಾಮಿ

ದಾವಣಗೆರೆ: ಫ್ರೂಟ್ಸ್ ತಂತ್ರಾಂಶದ ಎಫ್ಐಡಿ (ರೈತನ ಗುರುತಿನ ಚೀಟಿ‌ FID)ಯಲ್ಲಿ ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನನ್ನು ರೈತರು ನೋಂದಣಿ ಮಾಡಿಸಬೇಕು. ಇದರಿಂದ ಬರ ಪರಿಹಾರಕ್ಕೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಜಿಲ್ಲೆಯ ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಇಲ್ಲದೆ ಅನಾವೃಷ್ಠಿಯಿಂದ ಹಾಳಾಗಿರುವ ಬೆಳೆ ಹಾನಿ ಪರಿಶೀಲನೆ ನಡೆಸಿದರು. ಜಗಳೂರು ತಾಲ್ಲೂಕಿನ ಬಿಳಿಚೋಡು ಹಾಗೂ ದಾವಣಗೆರೆ ತಾ. ಕಂದನಕೋವಿ ಗ್ರಾಮದ ರೈತರ ಮೆಕ್ಕೆಜೋಳ ಬೆಳೆ ವೀಕ್ಷಣೆ ಮಾಡಿ, ಬೆಳೆ ಹಾನಿ ಕುರಿತು ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.

ಜಗಳೂರು ತಾಲ್ಲೂಕಿನಲ್ಲಿ ಹೆಚ್ಚಾಗಿ ಮೆಕ್ಕೆಜೋಳ ಬೆಳೆಯಲಾಗುತ್ತಿದ್ದು, ಮುಂಗಾರು ಮಳೆ ಕೊರತೆಯಿಂದಾಗಿ ಮೆಕ್ಕೆಜೋಳ ಬೆಳೆ ಸಂಪೂರ್ಣ ಹಾಳಾಗಿದೆ. ಜಾನುವಾರುಗಳಿಗೂ ಸಹ ಮೇವು ಸಿಗುತ್ತಿಲ್ಲ ಎಂದು ರೈತರು ಈ ವೇಳೆ ಅಳಲು ತೋಡಿಕೊಂಡರು. ವಿಮಾ ಕಂಪನಿಗಳು ರೈತರಿಗೆ ಬೆಳೆವಿಮೆ ಪರಿಹಾರ ನೀಡದೇ ಮೋಸ ಮಾಡುತ್ತಿದ್ದಾರೆ. ಈ ಕುರಿತು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಕೃಷಿ ಸಚಿವರಿಗೆ ಬಿಳಿಚೋಡು ಗ್ರಾಮದ ರೈತರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ಬೆಳೆವಿಮೆ ಪರಿಹಾರಕ್ಕೆ ಸಂಬಂಧಪಟ್ಟಂತೆ ಕಳೆದ ವರ್ಷ ಸಾಕಷ್ಟು ದೂರುಗಳು, ಸಮಸ್ಯೆಗಳಿವೆ. ಆದರೆ ಈ ವರ್ಷದಿಂದ ಬೆಳೆ ಪರಿಹಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಈ ಕುರಿತು ಈಗಾಗಲೇ ಸಭೆ ನಡೆಸಲಾಗಿದ್ದು, ರೈತರಿಗೆ ತೊಂದರೆಯಾಗದಂತೆ ಬೆಳೆವಿಮೆ ಪರಿಹಾರಕ್ಕೆ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಚನ್ನಗಿರಿ ಶಾಸಕರಾದ ಬಸವರಾಜ್ ವಿ.ಶಿವಗಂಗ, ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಕೃಷಿ ಇಲಾಖೆ ಅಧಿಕಾರಿಗಳು, ರೈತರು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top