ದಾವಣಗೆರೆ: ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುವಾಗ ಯಂತ್ರಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಕಟಾವು ಯಂತ್ರ ಧಗ ಧಗ ಹೊತ್ತಿ ಉರಿದಿದ್ದು, ಸಂಫೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮದ ಹೊಲವೊಂದರಲ್ಲಿ ಈ ಘಟನೆ ನಡೆದಿದೆ. ಮೆಕ್ಕೆಜೋಳ ಕಟಾವು ಮಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಯಂತ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಂತ್ರದ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದಂತಾಗಿದೆ. ಸುತ್ತಲೂ ಒಣಗಿದ ಮೆಕ್ಕೆಜೋಳ ಬೆಳೆ ಇರುವ ಹಿನ್ನಲೆ ಯಂತ್ರವನ್ನು ಸ್ವಲ್ಪ ದೂರ ಚಲಿಸಿಕೊಂಡು ಹೋಗಿ ನಿಲ್ಲಿಸಿದ್ದಾನೆ. ನೋಡ ನೋಡುತ್ತಿದ್ದಂತೆ ಇಡೀ ಯಂತ್ರ ಸುಟ್ಟು ಭಸ್ಮವಾಗಿದೆ. ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



