ದಾವಣಗೆರೆ; ತಾಲ್ಲೂಕಿನ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.
ಕಾರ್ಖಾನೆಯಲ್ಲಿನ ಕಬ್ಬಿನ ಸಿಪ್ಪೆ ಬೀಳುವ ಪ್ರದೇಶದಲ್ಲಿ ಬೆಂಕಿ ಬಿದ್ದಿದೆ. ಸಿಪ್ಪೆ ಪ್ರದೇಶವಾಗಿದ್ದರಿಂದ ಬೆಂಕಿ ಧಗ ಧಗಿಸಿ ಉರಿದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಐದು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಗೆ ವಿದ್ಯುತ್ ವೈರ್ , ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ. ಸುಮಾರು 5 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.



