ದಾವಣಗೆರೆ: ಚಲಿಸುತ್ತಿದ್ದ ಟಿಪ್ಪರ್ ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದ ಘಟನೆ ದಾವಣಗೆರೆ ನಗರದ ವಿದ್ಯಾನಗರದ ಕೊನೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಚಾಲನೆಯಲ್ಲಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಚಾಲಕ ಲಾರಿಯಿಂದ ಇಳಿದಿದ್ದಾನೆ. ನೋಡ ನೋಡುತ್ತುದ್ದಂತೆ ಇಂಜಿನ್ ನಲ್ಲಿ ಬೆಂಕಿ ಧಗ ಧಗನೆ ಹೊತ್ತಿ ಉರಿದಿದೆ. ಇದರಿಂದ ಸ್ಥಳೀಯರಲ್ಲಿ ಕೆಲ ಕಾಲ ಆತಂಕ ಉಂಟಾಗಿತ್ತು. ಚಾಲಕ ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ.



