ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ(ರಿ) ಸಂಯುಕ್ತಾಶ್ರಯದಲ್ಲಿ ನ.13ರಿಂದ 16 ರವರೆಗೆ ಗ್ಲಾಸ್ ಹೌಸ್‍ನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ನಾಳೆ ಸಂಜೆ 5 ಗಂಟೆಗೆ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆಗಾಗಿ ಪ್ರವೇಶವು ಉಚಿತವಾಗಿರುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ರೂಪಕ, ಲೇಸರ್ ಶೋ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಫಲಪುಷ್ಪ ಪ್ರದರ್ಶನದಲ್ಲಿ ಚಂದ್ರಯಾನ-3, ವಿವಿಧ ಕಲಾತ್ಮಕ ಪುಷ್ಪಗಳ ಪ್ರದರ್ಶನ ಸೇರಿದಂತೆ ಔಷಧಗಿಡಗಳ ಪ್ರದರ್ಶನ, ವಿವಿಧ ಖಾದ್ಯವುಳ್ಳ ಕ್ಯಾಂಟೀನ್‍ಗಳು, ಉತ್ತರ ಕರ್ನಾಟಕ, ಮಲೆನಾಡು, ಮೈಸೂರು ಸೇರಿದಂತೆ ವಿವಿಧ ಭಾಗಗಳ ತಿನಿಸುಗಳು ಇಲ್ಲಿರಲಿವೆ ಎಂದು ತಿಳಿಸಿದ್ದಾರೆ.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ಮಹಾನಗರ ಪಾಲಿಕೆ 23ನೇ ವಾರ್ಡ್ ಸದಸ್ಯೆ ರೇಖಾ ಸುರೇಶ್ ಗಂಡ್‍ಗಾಳೆ, ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ತೇಜಸ್ವಿನಿಗೌಡ, ಎಸ್.ಎಲ್.ಭೋಜೇಗೌಡ, ವೈ.ಎ ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ವಿಷೇಶ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ತೋಟಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ. ಶಮ್ಲ ಇಕ್ಬಾಲ್, ತೋಟಗಾರಿಕೆ ನಿರ್ದೇಶಕರಾದ ರಮೇಶ್.ಡಿ.ಎಸ್, ಜಿಲ್ಲಾ ನೋಡಲ್ ಅಧಿಕಾರಿ ಮತ್ತು ತೋಟಗಾರಿಕೆ ಜಂಟಿ ನಿರ್ದೇಶಕ ಎಂ.ಜಗದೀಶ್, ಜಿಲ್ಲಾ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕ ಎಂ.ವಿಶ್ವನಾಥ್, ತೋಟಗಾರಿಕೆ ಉಪನಿರ್ದೇಶಕ ಜಿ.ಸಿ ರಾಘವೇಂದ್ರ ಪ್ರಸಾದ್ ಉಪಸ್ಥಿತರಿರುವರು.



