ದಾವಣಗೆರೆ: ಸಾರ್ವಜನಿಕರು ಅರಣ್ಯ ಕಾಯ್ದೆ ಕಾನೂನುಗಳನ್ನು ಉಲ್ಲಂಘನೆ ಮಾಡಿ ಅನಧಿಕೃತವಾಗಿ ದಾವಣಗೆರೆ ನಗರದಲ್ಲಿ ಗಿಡ ಮರಗಳನ್ನು ಕಡಿತಲೆ ಮಾಡಿ ತೆರವುಗೊಳಿಸುತ್ತಿರುವುದು ಅರಣ್ಯ ಇಲಾಖೆಯ ಗಮನಕ್ಕೆ ಬಂದಿರುತ್ತದೆ.
ದಾವಣಗೆರೆ; ಈ ತಾಲ್ಲೂಕಿನ ಎಲ್ಲ ಗ್ರಾಮ, ಪಟ್ಟಣದಲ್ಲಿ ವಿದ್ಯುತ್ ವ್ಯತ್ಯಯ
ಗಿಡ-ಮರ ಕಡಿತ ಮಾಡಿದ ಆರೋಪಿ ವಿರುದ್ಧ ಅರಣ್ಯ ಪ್ರಕರಣ ದಾಖಲಿಸಲಾಗುತ್ತಿದೆ. ಸಾರ್ವಜನಿಕರು ಗಿಡ-ಮರಗಳಿಂದ ತೊಂದರೆಯಾದಲ್ಲಿ ಕಾನೂನು ಉಲ್ಲಂಘನೆ ಮಾಡದೇ ದಾವಣಗೆರೆ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ, ಪಾಲಿಕೆ ಮುಖಾಂತರ ಅರಣ್ಯ ಇಲಾಖೆಗೆ ಸಲ್ಲಿಕೆಯಾಗುವ ಅರ್ಜಿಯನ್ನು ಪರಿಶೀಲಿಸಿ ವೃಕ್ಷ ಅಧಿಕಾರಿಯವರು ಕ್ರಮ ಕೈಗೊಳ್ಳುತ್ತಾರೆ. ಅನುಮತಿ ಪಡೆಯದೇ ಮರಗಳನ್ನು ಕಡಿತಲೆ ಮಾಡಿದ್ದಲ್ಲಿ ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ-1976 ರಂತೆ ಕ್ರಮ ಕೈಗೊಳ್ಳಲಾಗುವುದೆಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ಸರಣಿ ಮನೆ ಕಳ್ಳತನ ಆರೋಪಿಗಳ ಬಂಧನ; 5.5 ಲಕ್ಷ ಮೌಲ್ಯದ ಸ್ವತ್ತು ವಶ