ದಾವಣಗೆರೆ: ಉಚಿತ ಲಘು, ಭಾರೀ ವಾಹನ ಚಾಲನಾ ತರಬೇತಿ ಜತೆ DL ಪಡೆಯಲು ಅರ್ಜಿ ಸಲ್ಲಿಸಿ….

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ, ದಾವಣಗೆರೆ ಜಿಲ್ಲಾ ಕಚೇರಿಯು 2022-23ನೇ ಸಾಲಿನ ಪರಿಶಿಷ್ಟ ಪಂಗಡದ ಎಲ್ಲಾ ಸಮುದಾಯಗಳ ಜನಾಂಗದವರಿಂದ ಮಹಿಳಾ ಮತ್ತು ಪುರುಷ ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ವಾಹನ (ಕಾರು/ಜೀಪ್) ಹಾಗೂ ಭಾರಿ ವಾಹನ (ಬಸ್ಸು) ಚಾಲನ ತರಬೇತಿ ಜೊತೆಗೆ ವಾಹನ ಚಾಲನಾ ಪರವಾನಗಿ ನೀಡುವ ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದೊಂದಿಗೆ ನೀಡುವ ಸಲುವಾಗಿ ಆಸಕ್ತ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಲಘು ವಾಹನ ಚಾಲನಾ ತರಬೇತಿ ಪಡೆಯಲು (ಕಾರ್ / ಜೀಪ್), ಕನಿಷ್ಠ 18 ವರ್ಷ ವಯೋಮಿತಿ ಪೂರ್ಣಗೊಂಡಿರಬೇಕು. ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ ಅಥವಾ ಎಸ್.ಎ.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ (ಟಿ.ಸಿ) ಅಥವಾ ನೋಟರಿಯಿಂದ ಪ್ರಮಾಣ ಪತ್ರ, ಆಧಾರ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ 05 ಭಾವಚಿತ್ರ ಸಲ್ಲಿಸಬೇಕು.
ಭಾರಿ ವಾಹನ ಚಾಲನಾ ತರಬೇತಿ ಪಡೆಯಲು (ಬಸ್ಸು) ಕನಿಷ್ಠ 20 ವರ್ಷ ವಯೋಮಿತಿ ಪೂರ್ಣಗೊಂಡಿರಬೇಕು. ಲಘುವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರೈಸಿರಬೇಕು. ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ ಅಥವಾ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ(ಟಿ.ಸಿ)ಅಥವಾ ನೋಟರಿಯಿಂದ ಪ್ರಮಾಣ ಪತ್ರ, ಆಧಾರ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ 05 ಭಾವಚಿತ್ರ ಸಲ್ಲಿಸಬೇಕು.

ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು/ಬಾರಿ ವಾಹನ ಚಾಲನಾ ತರಬೇತಿ(30 ದಿನಗಳು) ಮತ್ತು ತರಬೇತಿಯ ಅವಧಿಯಲ್ಲಿ ವಸತಿ ಮತ್ತು ಊಟೋಪಚಾರದ ವ್ಯವಸ್ಥೆ ನೀಡಲಾಗುತ್ತದೆ. ತರಬೇತಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತರಬೇತಿ ಕೇಂದ್ರ, ವಡ್ಡರಹಳ್ಳಿ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ-562130 ಇಲ್ಲಿ ನೀಡಲಗುವುದು.

ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಛೇರಿಯಿಂದ ಹಾಗೂ ನಿಗಮದ ವೆಬ್‍ಸೈಟ್ www.karnataka.gov.in/kmvstdcl. ಯಿಂದ ಅರ್ಜಿಯ ವಿವರಗಳನ್ನು ಪಡೆಯಬಹುದು. ಆಫ್‍ಲೈನ್ ಅಥವಾ ಆನ್‍ಲೈನ್ ಮೂಲಕ ಅರ್ಜಿಯನ್ನು ಏ.20 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೀರಲಿಂಗೇಶ್ವರ ಕುರುಬರ ಹಾಸ್ಟೆಲ್, ಜಯದೇವ ಸರ್ಕಲ್(ಹದಡಿರಸ್ತೆ) ದಾವಣಗೆರೆ ಜಿಲ್ಲಾ ಕಛೇರಿ ಅಥವಾ ದೂರವಾಣಿ ಸಂಖ್ಯೆ-08192-233309 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *