Connect with us

Dvgsuddi Kannada | online news portal | Kannada news online

ದಾವಣಗೆರೆ: ಉಚಿತ 30 ದಿನ ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ; ಊಟ, ವಸತಿ ಫ್ರೀ

IMG 20240220 201535

ದಾವಣಗೆರೆ

ದಾವಣಗೆರೆ: ಉಚಿತ 30 ದಿನ ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ; ಊಟ, ವಸತಿ ಫ್ರೀ

ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ ಜುಲೈ 10 ರಿಂದ 30 ದಿನಗಳ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿ ಆಯೋಜಿಸಲಾಗಿದ್ದು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 8 ರಂದು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top