ದಾವಣಗೆರೆ: ಗಾಂಧಿ ಜಯಂತಿ ಅಂಗವಾಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025 ರ ಅಕ್ಟೋಬರ್ 2 ರಂದು ಆಚರಿಸುವ ಮಹಾತ್ಮ ಗಾಂಧೀಜಿಯವರ 156 ನೇ ಜನ್ಮದಿನಾಚರಣೆ ಅಂಗವಾಗಿ ಯುವ ಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪøಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ಇತರೆ ವಿಚಾರಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲು ಗಾಂಧೀಜಿ ಕುರಿತಂತೆ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಪ್ರಬಂಧ ಸ್ಪರ್ಧ ವಿಷಯ

ಪ್ರೌಢಶಾಲಾ ವಿಭಾಗ: 1. ಸ್ವಚ್ಛತೆಯ ಪಾಠ – ಗಾಂಧೀಜಿಯವರ ಸಂದೇಶ, 2. ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ, 3. ಗಾಂಧೀಜಿಯವರ ಸ್ವಾತಂತ್ರ್ಯದ ಕನಸು – ನನ್ನ ಕಲ್ಪನೆ. ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ: 1. ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ 2. ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ 3. ಬದಲಾವಣೆ ನನ್ನಿಂದಲೇ ಆರಂಭ – ಗಾಂಧೀಜಿಯವರ ಪಾಠ.‌ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 900 ರಿಂದ 1000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: 1. ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ 2. ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ – ತತ್ವಗಳ ಹೋಲಿಕೆ 3.ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ – ಯುವಕರಿಗೆ ಗಾಂಧೀಜಿಯವರ ಪಾಠ. ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1400 ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಬಹುಮಾನ ಮೊತ್ತ ಎಷ್ಟು..?

ಜಿಲ್ಲಾ ಮಟ್ಟದಲ್ಲಿ ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ ರೂ.3000. ದ್ವಿತೀಯ ರೂ.2000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ರೂ.1000 ಗಳ ನಗದು ಬಹುಮಾನ ನೀಡಲಾಗುತ್ತದೆ. ಮತ್ತು ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಪ್ರಬಂಧಗಳನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಕಳುಹಿಸಲಿದ್ದು ಇಲ್ಲಿ ಆಯ್ಕೆಯಾದವರಿಗೆ ಪ್ರಥಮ ರೂ.31000/- ದ್ವಿತೀಯ ರೂ.21000/- ಹಾಗೂ ತೃತೀಯ ಬಹುಮಾನವಾಗಿ ರೂ.11000/- ನಗದು ಬಹುಮಾನ ನೀಡಲಾಗುತ್ತದೆ.

ಕೊನೆಯ ದಿನ ಯಾವಾಗ..?

ಪ್ರಬಂಧ ಸ್ಪರ್ಧೆಯನ್ನು ಆಯಾ ಶಾಲಾ ಹಂತ ಮತ್ತು ಕಾಲೇಜು ಹಂತದಲ್ಲಿ ದಿನಾಂಕ:09-09-2025 ರೊಳಗಾಗಿ ಏರ್ಪಡಿಸಿ ಮೌಲ್ಯಮಾಪನ ಮಾಡಿ ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕರ ಕಚೇರಿ ಮತ್ತು ಪದವಿ ಕಾಲೇಜುಗಳ ನೋಡಲ್ ಪ್ರಾಂಶುಪಾಲರ ಮೂಲಕ ವಿಜೇತರ ಪಟ್ಟಿಯೊಂದಿಗೆ ಪ್ರಬಂಧದ ಪ್ರತಿಗಳನ್ನು ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರಿಗೆ ಕಳುಹಿಸಿಕೊಡಲು ತಿಳಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *