Connect with us

Dvgsuddi Kannada | online news portal | Kannada news online

ದಾವಣಗೆರೆ: ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸಲು ಸುವರ್ಣಾವಕಾಶ: ಮಾ. 17 ರವರೆಗೆ ಅವಧಿ ವಿಸ್ತರಣೆ…!

images 46

ದಾವಣಗೆರೆ

ದಾವಣಗೆರೆ: ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸಲು ಸುವರ್ಣಾವಕಾಶ: ಮಾ. 17 ರವರೆಗೆ ಅವಧಿ ವಿಸ್ತರಣೆ…!

ದಾವಣಗೆರೆ; ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಜನರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಜನರಿಂದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿ ಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಅರ್ಜಿ ಪಡೆಯಲು ಕೊನೆಯ ದಿನಾಂಕವನ್ನು ಮಾ. 17 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಕೆಗೆ ಮಾ. 07 ಕೊನೆಯ ದಿನವಾಗಿತ್ತು. ಆದರೆ ಪ್ರಸ್ತುತ ಅರ್ಜಿ ಪಡೆಯುವ ದಿನಾಂಕವನ್ನು ಮಾ.17 ರ ವರೆಗೆ ವಿಸ್ತರಿಸಲಾಗಿದೆ. ಉಚಿತ ಅರ್ಜಿಗಳನ್ನು ನಿಗಮದ ಜಿಲ್ಲಾ ಕಛೇರಿಯಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 18 ವರ್ಷ ಮೇಲ್ಪಟ್ಟು ಹಾಗೂ 55 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಪಾಸ್‍ಪೋರ್ಟ್ ಅಳತೆಯ 2 ಭಾವಚಿತ್ರಗಳು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿದಾರರು ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. 5 ವರ್ಷಗಳ ಅವಧಿ ಒಳಗಿರಬೇಕು, ನಕಲು ಪ್ರತಿ ಲಗತ್ತಿಸಬೇಕು. ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಕನಿಷ್ಠ 02 ಎಕರೆ ಗರಿಷ್ಟ 05 ಎಕರೆ ಜಮೀನನ್ನು ಹೊಂದಿರಬೇಕು ಈ ಬಗ್ಗೆ ಸಂಬಂಧಿಸಿದ ತಹಸಿಲ್ದಾರ್ ಮತ್ತು ಕಂದಾಯ ಅಧಿಕಾರಿಗಳಿಂದ ಪಡೆದ ದೃಢೀಕೃತ ಪ್ರಮಾಣ ಪತ್ರವನ್ನು ಲಗತ್ತಿಸುಬೇಕು.

ವಿಳಾಸ ದೃಢೀಕರಣಕ್ಕೆ ಪಡಿತರ ಚೀಟಿ ಮತ್ತು ಚುನಾವಣಾ ಗುರುತಿನ ಚೀಟಿ ಹಾಗೂ ಕೆ.ಪಿ.ಟಿ.ಸಿ.ಎಲ್. ಆರ್.ಆರ್. ನಂ. ಇರುವ ಬಿಲ್ಲಿನ ಜೆರಾಕ್ಸ್ ಪ್ರತಿ ಮತ್ತು ಆಧಾರ ಕಾರ್ಡ್‍ನ ಜೆರಾಕ್ಸ್ ಪ್ರತಿ ಲಗತ್ತಿಸಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000 ರೂಗಳ ಒಳಗಿರಬೇಕು. ಅರ್ಜಿದಾರರು ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ನಮೂನೆಗಳನ್ನು ನಿಗಮದ ವೆಬ್‍ಸೈಟ್‍ನಲ್ಲಿ ಹಾಗೂ ಉಚಿತವಾಗಿ ಜಿಲ್ಲಾ ಕಛೇರಿಯಲ್ಲಿ ಪಡೆಯಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ನಿಗಮದ ವೆಬ್‍ಸೈಟ್ www.dbcdc.karnataka.gov.in ಹಾಗೂ ಕಛೇರಿ ದೂರವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರುಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದಾವಣಗೆರೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top