Connect with us

Dvgsuddi Kannada | online news portal | Kannada news online

ದಾವಣಗೆರೆ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ; 2 ಲಕ್ಷ ಸಹಾಯಧನ

ದಾವಣಗೆರೆ

ದಾವಣಗೆರೆ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ; 2 ಲಕ್ಷ ಸಹಾಯಧನ

ದಾವಣಗೆರೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್‍ನಲ್ಲಿ ಅಕ್ಟೋಬರ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ/ಸಮುದಾಯಗಳಿಗೆ ಸೇರಿದ, 18 ರಿಂದ 60 ವರ್ಷದೊಳಗಿನ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು ಹಾಲಿ ಜಮೀನುಗಳು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರುವವರು ಸೌಲಭ್ಯ ಪಡೆಯಬಹುದು.

ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000 ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000 ಗಳ ಒಳಗಿರಬೇಕು. ಕನಿಷ್ಟ 02 ಎಕರೆ ಜಮೀನು ಹೊಂದಿರಬೇಕು. ವೈಯಕ್ತಿಕ ಕೊಳವೆ ಬಾವಿ ಯೋಜನೆಯಡಿ ಘಟಕ ವೆಚ್ಚ ರೂ.2.50 ಲಕ್ಷ ಇದರಲ್ಲಿ ರೂ. 2.00 ಲಕ್ಷ ಸಹಾಯಧನ ಹಾಗೂ ರೂ.50 ಸಾವಿರ ನಿಗಮದಿಂದ ಶೇ.4 ರ ಬಡ್ಡಿದರದಲ್ಲಿ ನೀಡವ ಸಾಲದ ಮೊತ್ತ ಒಳಗೊಂಡಿರುತ್ತದೆ. ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿದ್ದು ಆಧಾರ್ ಕಾರ್ಡ್‍ನಲ್ಲಿರುವಂತೆಯೇ ರೈತರ ಹೆಸರು, ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್‍ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ https://www.dbcdc.karnataka.gov.in ನಲ್ಲಿ ಹಾಗೂ ಸಹಾಯವಾಣಿ ಸಂಖ್ಯೆ 080-22374832, 9606066389 ಮತ್ತು 8824300400 ಗೆ ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top