ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಮೊದಲನೇ 30 ತಿಂಗಳ ಅವಧಿಗೆ ದಾವಣಗೆರೆ ತಾಲ್ಲೂಕುಗಳ ಗ್ರಾ.ಪಂಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಮೀಸಲಾತಿ ನಿಗದಿಪಡಿಸಲಾಯಿತು. ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಮೀಸಲಾತಿ ನಿಗದಿಪಡಿಸಲಾಯಿತು.




