ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಬ್ಲಾಸ್ಟ್ ಆಗಿ ಒರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬ್ಲಾಸ್ಟ್ ಆಗಿದೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಒರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಇನ್ನೊಬ್ಬ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.