ದಾವಣಗೆರೆ: ಅಡುಗೆ ಮಾಡಲು ಗ್ಯಾಸ್ ಆನ್ ಮಾಡಿದ್ದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರಿಗೆ ತೀವ್ರವಾಗಿ ಗಾಯಗೊಂಡ ಘಟನೆ ನಗರದ ಎಸ್ ಒಜಿ ಕಾಲೋನಿಯಲ್ಲಿ ನಡೆದಿದೆ.
ಕಾಲೋನಿ ನಿವಾಸಿಗಳಾದ ಲಲಿತಮ್ಮ(50), ಮಲ್ಲೇಶಪ್ಪ(60), ಪಾರ್ವತಮ್ಮ(45), ಸೌಭಾಗ್ಯ(36) ಪ್ರವೀಣ್(35) ಗಾಯಗೊಂಡವರು. ಮನೆಯಲ್ಲಿ ಅಡುಗೆ ಮಾಡಲು ಗ್ಯಾಸ್ ಆನ್ ಮಾಡಲು ಹೋಗಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದ್ದು, ಮನೆಯ ಮೇಲ್ಛಾವಣಿಯೇ ಕಿತ್ತು ಹೋಗಿದೆ.
ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ನಗರದ ಹೈಟೆಕ್ ಆಸ್ಪತ್ರೆ ಗೆ ರವಾನೆ ಮಾಡಲಾಗುದೆ. ದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದ ಸದ್ದು ಸುತ್ತಮುತ್ತ ಮನೆಯವರಿಗೆ ಆತಂಕ ಮೂಡಿಸಿತ್ತು. ಇಡೀ ಮನೆಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ.



