ದಾವಣಗೆರೆ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಫೋಟಗೊಂಡು ಕಿರಾಣಿ ಅಂಗಡಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ನಡೆದಿದೆ.
ದಾವಣಗೆರೆ: ಇನ್ಮುಂದೆ ಐಎಸ್ ಐ ಮಾರ್ಕ್ ಹೆಲ್ಮೆಟ್ ಕಡ್ಡಾಯ ; 5 ಸಾವಿರಕ್ಕೂ ಹೆಚ್ಚು ಹಾಫ್ ಹೆಲ್ಮೆಟ್ ವಶ
ಜಗಳೂರು ತಾಲೂಕಿನ ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಕುಮಾರ್ ಎಂಬುವವರಿಗೆ ಸೇರಿದ ಕಿರಾಣಿ ಅಂಗಡಿ ಬೆಂಕಿಗೆ ಸಂಪೂರ್ಣ ಸುಟ್ಟು ಹೋಗಿದೆ. ಅಂಗಡಿಯಲ್ಲಿ ಇಟ್ಟಿದ್ದ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿ ಸ್ಫೋಟಗೊಂಡಿದೆ. ಇದರ ಪರಿಣಾಮ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ದಾವಣಗೆರೆ: ಫೆ.24ರ ಅಡಿಕೆ ಧಾರಣೆ; ದಿಢೀರ್ ಏರಿಕೆ ಬಳಿಕ ಕುಸಿತ..!!!
ಸ್ಫೋಟ ಶಬ್ದ ಕೇಳುತ್ತಿದ್ದಂತೆ ಜನ ಗಾಬರಿಯಾಗಿ ಓಡಿ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಅಂಗಡಿ ಮಾಲೀಕ ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಜಗಳೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.