ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 28 ರಿಂದ ಜನವರಿ 1 ರವರೆಗೆ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ಡಿಸೆಂಬರ್ 28 ರಂದು ಸಂಜೆ 5 ಗಂಟೆಗೆ ಗಾಜಿನ ಮನೆಯಲ್ಲಿ ಫಲಪುಷ್ಪ ಕಾರ್ಯಕ್ರಮವನ್ನು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಯಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್.ಕೆ, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಮಹಾನಗರಪಾಲಿಕೆ ಸದಸ್ಯರಾದ ರೇಖಾ ಸುರೇಶ್ ಗಂಡ್‍ಗಾಳೆ, ತೋಟಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ; ಶಮ್ಲ ಇಕ್ಬಾಲ್, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ರಮೇಶ್ ಡಿ.ಎಸ್ , ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿಗಳಾದ ಎಂ.ಜಗದೀಶ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ತೋಟಗಾರಿಕೆ ಉಪನಿರ್ದೇಶಕರಾದ ರಾಘವೇಂದ್ರ ಪ್ರಸಾದ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ವೀರಭದ್ರಸ್ವಾಮಿ ಭಾಗವಹಿಸುವರು.