Connect with us

Dvgsuddi Kannada | online news portal | Kannada news online

ದಾವಣಗೆರೆ: ಮೇ 28 ರಂದು ಜಿಎಂಐಟಿ 18ನೇ ಪದವಿ ಪ್ರದಾನ ಸಮಾರಂಭ; 574 ಪದವಿ, 8 ಪಿಎಚ್ ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ದಾವಣಗೆರೆ

ದಾವಣಗೆರೆ: ಮೇ 28 ರಂದು ಜಿಎಂಐಟಿ 18ನೇ ಪದವಿ ಪ್ರದಾನ ಸಮಾರಂಭ; 574 ಪದವಿ, 8 ಪಿಎಚ್ ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ದಾವಣಗೆರೆ; ನಗರದ ಜಿಎಂ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ‌ ಮೇ 28ರಂದು 18ನೇ ಪದವಿ ಪ್ರದಾನ ಸಮಾರಂಭವನ್ನು ಕಾಲೇಜಿನ ಜಿ ಮಲ್ಲಿಕಾರ್ಜುನಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 2021-22ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡುವ ಕಾರ್ಯಕ್ರಮ ಇದಾಗಿದ್ದು, ಇಂಜಿನಿಯರಿಂಗ್ ಮತ್ತು ಎಂಬಿಎ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ ಸಂಜಯ್ ಪಾಂಡೆ ಎಂಬಿ ತಿಳಿಸಿದ್ದಾರೆ.

ಇಂಜಿನಿಯರಿಂಗ್ ವಿಭಾಗದಿಂದ 520 ವಿದ್ಯಾರ್ಥಿಗಳು, ಎಂಬಿಎ ವಿಭಾಗದಿಂದ 54 ವಿದ್ಯಾರ್ಥಿಗಳು ಸೇರಿ ಒಟ್ಟು 574 ವಿದ್ಯಾರ್ಥಿಗಳು ಪದವಿ ಪ್ರಮಾಣವನ್ನು ಸ್ವೀಕರಿಸಲಿದ್ದಾರೆ. ಇದರ ಜೊತೆಗೆ ಕಾಲೇಜಿನ ಸಂಶೋಧನಾ ವಿಭಾಗದಿಂದ 8 ವಿದ್ಯಾರ್ಥಿಗಳು ಪಿ ಎಚ್ ಡಿ ಪ್ರಮಾಣ ಪತ್ರವನ್ನು ಸ್ವೀಕರಿಸಲಿದ್ದಾರೆ ಎಂದರು.

ಪದವಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ ಟಿ ವಿ ಕಟ್ಟಿಮನಿ ಭಾಗವಹಿಸಲಿದ್ದಾರೆ. ಇವರ ಜೊತೆ ಶ್ರೀಶೈಲ ಎಜುಕೇಶನಲ್ ಟ್ರಸ್ಟ್ ನ ಚೇರ್ಮನ್ ಶ್ರೀ ಜಿಎಂ ಪ್ರಸನ್ನ ಕುಮಾರ್, ಕಾರ್ಯದರ್ಶಿಗಳಾದ ಜಿಎಂ ಲಿಂಗರಾಜು, ಜಿಎಂಐಟಿ ಕಾಲೇಜಿನ ಆಡಳಿತ ಅಧಿಕಾರಿ ವೈಯೂ ಸುಭಾಷ್ ಚಂದ್ರ ,ಜಿಎಂ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ಸಿ ಇ ಓ ಡಾ ಯು ಚಂದ್ರಶೇಖರ್, ಆಡಳಿತ ಮಂಡಳಿಯ ಸದಸ್ಯರಾದ ಡಾ ಕೆ ದಿವ್ಯಾನಂದ, ಡೀನ್ ಅಕಾಡೆಮಿಕ್ಸ್ ಮತ್ತು ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ ಸುನಿಲ್ ಕುಮಾರ್ ಬಿಎಸ್, ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪದವಿ ಪ್ರಧಾನ ಸಮಾರಂಭದ ಸಂಯೋಜಕ ಡಾ ಪ್ರವೀಣ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top