Connect with us

Dvgsuddi Kannada | online news portal | Kannada news online

ದಾವಣಗೆರೆ: GMIT ಕಾಲೇಜಿನ 15 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

IMG 20221118 WA0000

ದಾವಣಗೆರೆ

ದಾವಣಗೆರೆ: GMIT ಕಾಲೇಜಿನ 15 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ದಾವಣಗೆರೆ: ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟೆಕ್ ಮಹೇಂದ್ರ ಕಂಪನಿಯ ವತಿಯಿಂದ ಐದು ವಿದ್ಯಾರ್ಥಿಗಳು, ಹೆಕ್ಸಾವೇರ್ ಕಂಪನಿ ವತಿಯಿಂದ ಮೂರು ವಿದ್ಯಾರ್ಥಿಗಳು ಮತ್ತು ಆಪ್ಟಂ ಸಲ್ಯೂಷನ್ ಕಂಪನಿ ವತಿಯಿಂದ ಬಯೋಟೆಕ್ನಾಲಜಿ ವಿಭಾಗದ ಏಳು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಇನ್ನೂ ಅನೇಕ ಕಂಪನಿಗಳು 2023ಕ್ಕೆ ಹೊರ ಹೋಗುವ ವಿದ್ಯಾರ್ಥಿಗಳಿಗೆ ಸರದಿಯಲ್ಲಿದ್ದು, ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಕಂಪನಿ ಅವಕಾಶಗಳನ್ನು ನೀಡಲಾಗುವುದು ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.

ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ವೈ ಯು ಸುಭಾಷ್ ಚಂದ್ರ, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top