ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ರಿನೆಕ್ಸ್ ಟೆಕ್ನಾಲಜಿ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಎಂಬಿಎ ವಿಭಾಗದ 18 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ಇದುವರೆಗೂ ಒಟ್ಟು 369 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದಾರೆ. ಇನ್ನೂ ಹಲವು ಪ್ರತಿಷ್ಠಿತ ಕಂಪನಿಗಳ ಸಂದರ್ಶನ ಪ್ರಕ್ರಿಯೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ರೀತಿಯ ತರಬೇತಿ ನೀಡಿ ಕೈಗಾರಿಕೆಗಳಿಗೆ ತಕ್ಕಂತೆ ತಯಾರು ಮಾಡುವ ಜವಾಬ್ದಾರಿಯನ್ನು ಹೊಂದಿದ್ದೇವೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಜಿಎಂ ಲಿಂಗರಾಜು, ಆಡಳಿತಾಧಿಕಾರಿ ವೈ ಯು ಸುಭಾಷ್ ಚಂದ್ರ , ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ ಸಂಜಯ್ ಪಾಂಡೆ, ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಬಸವರಾಜ್ ವಿಭಾಗದ ಪ್ಲೇಸ್ಮೆಂಟ್, ಸಂಯೋಜಕರಾದ ಪ್ರೊ ವಿನಯ್ , ಪ್ರಾಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.