Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಎಂಐಟಿ ವಿದ್ಯಾರ್ಥಿಗಳು ವಿವಿಧ ಕಂಪನಿ ಸಂದರ್ಶನದಲ್ಲಿ ಆಯ್ಕೆ

gmit

ದಾವಣಗೆರೆ

ದಾವಣಗೆರೆ: ಜಿಎಂಐಟಿ ವಿದ್ಯಾರ್ಥಿಗಳು ವಿವಿಧ ಕಂಪನಿ ಸಂದರ್ಶನದಲ್ಲಿ ಆಯ್ಕೆ

ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ವಿವಿಧ ವಿಭಾಗದ 23 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಮೆಕ್ಯಾನಿಕಲ್ ವಿಭಾಗದ ಐದು ವಿದ್ಯಾರ್ಥಿಗಳು ಮಹೇಂದ್ರ ಆಟೋಮೋಟಿವ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿಭಾಗದ ಎಂಟು ವಿದ್ಯಾರ್ಥಿಗಳು ಎಂ ಎನ್ ಸಿ ಎಲೆಕ್ಟ್ರಾನಿಕ್ಸ್ ಕೋರ್ ಕಂಪನಿಗೆ, ಬಯೋಟೆಕ್ನಾಲಜಿ ವಿಭಾಗದ ಎಂಟು ವಿದ್ಯಾರ್ಥಿಗಳು ನ್ಯಾಚುರಲ್ ಕ್ಯಾಪ್ಸುಲ್ಸ್ ಲಿಮಿಟೆಡ್ ಮತ್ತು ಎಂಬಿಎ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು ಐವಾಯಂಟ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಆಯ್ಕೆಯಾಗಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ವರ್ಷದ ಜಾಬ್ ಆಫರ್ಸ್ 338 ತಲುಪಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಕಂಪನಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ ಸಂಜಯ್ ಪಾಂಡೆ ಎಂಬಿ ತಿಳಿಸಿದರು.ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಲಿಂಗರಾಜು ಜಿಎಂ, ಆಡಳಿತ ಅಧಿಕಾರಿ ವೈ ಯು ಸುಭಾಷ್ ಚಂದ್ರ, ವಿಭಾಗಗಳ ಮುಖ್ಯಸ್ಥರುಗಳು ಮತ್ತು ಪ್ರಾಧ್ಯಾಪಕ ವರ್ಗದವರು ವಿದ್ಯಾರ್ಥಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top