ದಾವಣಗೆರೆ: ನಗರದ ಜಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ಜ.11 ರಿಂದ ಎರಡು ದಿನಗಳ ಕಾಲ ವಿವಿಧ ತಾಂತ್ರಿಕ ಸ್ಪರ್ಧೆಗಳನ್ನು ಆಯೋಜಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ.ವೈ.ವಿಜಯ್ ಕುಮಾರ್ ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಂತ್ರಿಕ ಸಂಸ್ಥೆಗಳಾದ ಬಿ.ಪಿ.ಎ ಲ್ಯಾಬ್ಸ್ ಹಾಗೂ ಸೂಕ್ಷ್ಮಸ್ ಸಹಯೋಗದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿದೆ. ಈಗಾಗಲೇ ರಾಜ್ಯದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಿಂದ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲ್ಲಿ ಹೆಸರು ನೊಂದಾಯಿಸಿಕೊಂಡಿದ್ದಾರೆ. ಪ್ರಬಂಧ ಮಂಡನೆ, ಕೋಡಿಂಗ್ ಸೇರಿದಂತೆ ವಿವಿಧ ಸ್ಪರ್ಧೆ ನಡೆಯಲಿದೆ ಎಂದರು.
ಡಾ. ಸುನಿಲ್ ಕುಮಾರ್ ಬಿ.ಎಸ್ ಮಾತನಾಡಿ, ಶಿವಮೊಗ್ಗ, ಚಿತ್ರದುರ್ಗ, ರಾಣೆಬೆನ್ನೂರು, ಚಿಕ್ಕಮಗಳೂರು, ಕಾರ್ಕಾಳ, ಮೈಸೂರು, ಬೆಂಗಳೂರು ಮುಂತಾದ ನಗರಗಳ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ ಎಂದರುಈ ಸಂದರ್ಭದಲ್ಲಿ ಅಮಿತ್ ಶೇಖರ್, ಡಾ.ತೇಜಸ್ವಿ ಕಟ್ಟಿಮನಿ ಇದ್ದರು.



