ದಾವಣಗೆರೆ; ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಮೇವೆರಿಕ್ ಸಿಸ್ಟಮ್ಸ್ ಕಂಪನಿಯು ನಡೆದ ಸಂದರ್ಶನ ಪ್ರಕ್ರಿಯೆಯಲ್ಲಿ ಐದು ವಿದ್ಯಾರ್ಥಿಗಳು ಸಾಫ್ಟ್ವೇರ್ ಇಂಜಿನಿಯರಿಂಗ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಿಂದ ತಿಪ್ಪೇಶ್ ಬಿ, ರಕ್ಷಿತಾ ಎಂಎ, ಆಶ್ರಿತಾ ಎಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮಷೀನ್ ಲರ್ನಿಂಗ್ ವಿಭಾಗದಿಂದ ವೀರೇಶ್ ಸಿಎಚ್, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಿಂದ ರಕ್ಷಿತಾ ಎಚ್ ಟಿ ಆಯ್ಕೆಯಾಗಿದ್ದಾರೆ.
ಅದೇ ರೀತಿ ಆರ್ ಬಿ ಸ್ಟ್ರಕ್ಚರ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಇಬ್ಬರು ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಭೂಮಿಕಾ ಯುಸಿ ಮತ್ತು ಸಾಯಿ ಕಾರ್ತಿಕ್ ಎಂ ಆಯ್ಕೆಯಾಗಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಶ್ರೀ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ಶ್ರೀ ವೈ ಯು ಸುಭಾಷ್ ಚಂದ್ರ, ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ವಿಭಾಗದ ಮುಖ್ಯಸ್ಥರುಗಳು, ಪ್ರಾಧ್ಯಾಪಕರುಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.



