ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ನಾಲಜಿ ವಿಭಾಗದ 8 ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ನ್ಯಾಚುರಲ್ ಕ್ಯಾಪ್ಸೂಲ್ಸ್ ಲಿಮಿಟೆಡ್ ಕಂಪನಿಯು ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಾದ ಅಕ್ಷಯ್ ಜೆ ಎಸ್, ದಿಲೀಪ್ ಡಿ, ದಿಲೀಪ್ ಜಿ, ಕಿರಣ್ ಬಿ, ಮಂಜುನಾಥ ಎಸ್, ನಿಖಿಲ್ ಎಂ, ಪ್ರಮೋದ್ ಬಿ ಮತ್ತು ಸಮರ್ಥ್ ವಿಎಂ ಆಯ್ಕೆಯಾದ ವಿದ್ಯಾರ್ಥಿಗಳು ಎಂದು ವಿಭಾಗದ ಮುಖ್ಯಸ್ಥರಾದ ಡಾ ಪ್ರಕಾಶ್ ಕೆ ಕೆ ತಿಳಿಸಿದ್ದಾರೆ.
ಇಂಜಿನಿಯರಿಂಗ್ ಬಯೋಟೆಕ್ನಾಲಜಿ ವಿದ್ಯಾರ್ಥಿಗಳಿಗೆ ಹಲವು ಕೈಗಾರಿಕಾ ಅವಕಾಶಗಳಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಜಾಬ್ ಆಫರ್ ಪಡೆಯಲಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ. ಪ್ರಸಕ್ತ ವರ್ಷದ ಪ್ಲೇಸ್ಮೆಂಟ್ಸ್ 317 ತಲುಪಿದ್ದು, ಇನ್ನು ಅನೇಕ ಕಂಪನಿಗಳ ಸಂದರ್ಶನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ವೈಯೂ ಸುಭಾಷ್ ಚಂದ್ರ, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.



