ದಾವಣಗೆರೆ; ನಗರದ ಜಿಎಂಎಸ್ ಅಕ್ಯಾಡೆಮಿಯ ಫಸ್ಟ್ ಗ್ರೇಡ್ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ, ಬಿಕಾಂ, ಬಿಸಿಎ ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ಶ್ವೇತ ಮರಿಗೌಡರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟು 62 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹತ್ತು ಹಲವು ಕಂಪನಿಗಳು ಸಂದರ್ಶನವನ್ನು ನಡೆಸಲಿದ್ದು ಹೆಚ್ಚಿನ ವಿದ್ಯಾರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಶಾಂತಕುಮಾರ್ ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ಸಿ ಎಸ್ ಬಿ ಬ್ಯಾಂಕ್ ಮತ್ತು ಸ್ಕಾಲರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗಳಿಗೆ ಕ್ರಮವಾಗಿ 3 ಮತ್ತು 13 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಂಪನಿಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಸ್ಯಾಲರಿ ಪ್ಯಾಕೇಜ್ ನೀಡುತ್ತಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಅನೇಕ ತರಬೇತಿ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಕೈಗಾರಿಕೆಗಳಿಗೆ ತಕ್ಕಂತೆ ಬೇಕಾದ ಎಲ್ಲಾ ನೈಪುಣ್ಯತೆಯನ್ನು ಒದಗಿಸಲಾಗುತ್ತಿದೆ.
ಇಂದು ನಡೆದ ಗ್ರೂಪ್ ಫೋಟೋ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಶ್ವೇತ ಮರಿಗೌಡರ, ಸಹ ಆಡಳಿತ ಅಧಿಕಾರಿ ಶಿವಕುಮಾರ್ ಜಿ ಜೆ, ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್, ಶಾಂತಕುಮಾರ್ , ವಿಭಾಗದ ಮುಖ್ಯಸ್ಥರುಗಳು, ಸಂಯೋಜಕರುಗಳು ಆಯ್ಕೆಯಾದ ವಿದ್ಯಾರ್ಥಿಗಳ ಜೊತೆಗೆ ಉಪಸ್ಥಿತರಿದ್ದರು.