Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಎಂಐಟಿ ಕಾಲೇಜಿಗೆ ನಾಲ್ಕು ರ‍್ಯಾಂಕ್‌; ಐಎಸ್ ವಿಭಾಗದಲ್ಲಿ 1, ಬಿಟಿ ವಿಭಾಗಕ್ಕೆ 3 ರ‍್ಯಾಂಕ್‌

IMG 20230226 160104

ದಾವಣಗೆರೆ

ದಾವಣಗೆರೆ: ಜಿಎಂಐಟಿ ಕಾಲೇಜಿಗೆ ನಾಲ್ಕು ರ‍್ಯಾಂಕ್‌; ಐಎಸ್ ವಿಭಾಗದಲ್ಲಿ 1, ಬಿಟಿ ವಿಭಾಗಕ್ಕೆ 3 ರ‍್ಯಾಂಕ್‌

ದಾವಣಗೆರೆ: ಬೆಳಗಾವಿಯ ವಿಶ್ವೇಶ್ವರಾಯ ಟೆಕ್ನಾಲಜಿಕಲ್ ಯೂನಿವರ್ಸಿಟಿ 2022ರ ಸಾಲಿನ ಇಂಜಿನಿಯರಿಂಗ್ ವಿಭಾಗದ ರ್‍ಯಾಂಕ್ ಗಳನ್ನು ಬಿಡುಗಡೆ ಮಾಡಿದ್ದು, ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ವಿಭಾಗದಲ್ಲಿ ನಾಲ್ಕು ರ‍್ಯಾಂಕ್‌ ಗಳನ್ನು ಪಡೆದುಕೊಂಡಿದೆ.

ಇನ್ಫಾಫಾರ್ಮೆಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ನಿಕಿತಾ ಎಚ್ ಬಿ ಆರನೇ ರ‍್ಯಾಂಕ್‌ ಪಡೆದಿದ್ದು, ಬಯೋಟೆಕ್ನಾಲಜಿ ಇಂಜಿನಿಯರಿಂಗ್ ವಿಭಾಗದಿಂದ ನಿವೇದಿತಾ ಬಿ ಎಂ, ಪಲ್ಲವಿ ಕೆಇ ಮತ್ತು ಭೂಮಿಕಾ ಕ್ರಮವಾಗಿ ನಾಲ್ಕನೇ, ಐದನೇ ಮತ್ತು ಏಳನೇ ರ‍್ಯಾಂಕ್‌ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ವೈ ಯು ಸುಭಾಷ್ ಚಂದ್ರ, ಕಾಲೇಜು ಪ್ರಾಂಶುಪಾಲ ಡಾ. ಸಂಜಯ್ ಪಾಂಡೆ ಎಂಬಿ, ಡೀನ್ ಅಕಾಡೆಮಿಕ್ಸ್ ಮತ್ತು ಐ ಎಸ್ ವಿಭಾಗದ ಮುಖ್ಯಸ್ಥರಾದ ಡಾ ಸುನಿಲ್ ಕುಮಾರ್ ಬಿಎಸ್, ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಡಾ. ಪ್ರಕಾಶ್, ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top