ದಾವಣಗೆರೆ; ಪ್ರಸಕ್ತ ಸಾಲಿನ ಶೇ. 24.10, 7.25% ಮತ್ತು 5% ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ, ಅಲ್ಪಸಂಖ್ಯಾತರ ಮತ್ತು ದೈಹಿಕ ವಿಕಲಚೇತನರ ಅರ್ಹ ಫಲಾನುಭವಿಗಳಿಗೆ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಜಗಳೂರು ಪಟ್ಟಣ ಪಂಚಾಯಿತಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಫೆ.23 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಸಿ.ಲೋಕ್ಯಾನಾಯ್ಕ ತಿಳಿಸಿದ್ದಾರೆ.



