ದಾವಣಗೆರೆ: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗದವರು ಅರ್ಜಿ ಸಲ್ಲಿಸಬಹುದು.
ವೆಬ್ ಸೈಟ್ https://shp.karnataka.gov.in/bcwd ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ವೀಕ್ಷಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ತಾಲ್ಲೂಕು ಕಲ್ಯಾಣಾಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಜಗಳೂರು ದೂ.ಸಂ:08196-227040 ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ಅಸ್ಮಾಬಾನು ತಿಳಿಸಿದ್ದಾರೆ.



