ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.
ಪಿ.ಯು.ಸಿ ಐ.ಟಿ.ಐ ಡಿಪ್ಲೊಮಾ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನಲ್ಲಿ ಜೂನ್ 28 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ :08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ದೂ.ಸಂ : 08192-250066 ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳನ್ನು ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.