ದಾವಣಗೆರೆ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ದಿಂದ 2022-23ನೇ ಸಾಲಿಗೆ ಈ ಕೆಳಕಂಡ ಯೋಜನೆಗಳಲ್ಲಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಈ ಕೆಳಕಂಡ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಾಯಕ ಕಿರಣ ಯೋಜನೆ : ಈ ಯೋಜನೆಯಡಿ ಸೌಲಭ್ಯ ಪಡೆಯಲು ವೃತ್ತಿ ಕಸುಬುದಾರರು ಹಾಗೂ ಕುಶಲಕರ್ಮಿಗಳಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 1.00 ಲಕ್ಷಗಳವರೆಗೆ ಆರ್ಥಿಕ ನೆರವು,
ಸ್ವ ಸಹಾಯ ಸಂಘಗಳಿಗೆ ಉತ್ತೇಜನ: ಈ ಯೋಜನೆಯಡಿ ಸೌಲಭ್ಯ ಪಡೆಯಲು ವೀರಶೈವ ಲಿಂಗಾಯತ ಸಮುದಾಯದ ಸ್ವ ಸಹಾಯ ಗುಂಪುಗಳ ಗರಿಷ್ಠ 15 ಸದಸ್ಯರಿಗೆ ತಲಾ ರೂ.5,000/-ಗಳ ಸಹಾಯಧನ ಹಾಗೂ ರೂ. 10,000/-ಗಳ ಸಾಲವನ್ನು ಶೇ.4 ರ ಬಡ್ಡಿ ದರದಲ್ಲಿ ಪ್ರತಿ ಗುಂಪಿಗೆ ರೂ. 75,000/-ಗಳ ಸಹಾಯಧನ ಹಾಗೂ ರೂ. 1,50,000/-ಗಳ ಸಾಲ ಒಟ್ಟು ರೂ. 2,25,000/-ಗಳನ್ನು ನೀಡಲಾಗುವುದು.
ಬಸವ ಬೆಳಗು: ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 1.00 ಲಕ್ಷಗಳ ಮಿತಿಯಲ್ಲಿ ಗರಿಷ್ಟ ರೂ. 5.00 ಲಕ್ಷಗಳವರೆಗೆ ವಾರ್ಷಿಕ ಶೇ.2 ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.
ವಿದೇಶ ವಿದ್ಯಾವಿಕಾಸ: ಮಾನ್ಯತೆ ಪಡೆದಿರುವಂತಹ ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ. 3.50 ಲಕ್ಷಗಳಂತೆ 3 ವರ್ಷದ ಅವಧಿಗೆ ಒಟ್ಟು ರೂ. 10.00 ಲಕ್ಷಗಳನ್ನು ಶೇ.2 ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.
ಜೀವಜಲ ಯೋಜನೆ: ಈ ಯೋಜನೆಯಡಿ ಸೌಲಭ್ಯ ಪಡೆಯಲು ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ಕನಿಷ್ಠ 2 ಎಕರೆ ಹಾಗೂ ಗರಿಷ್ಟ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ನಿಗದಿಪಡಿಸಿರುವ ಘಟಕ ವೆಚ್ಚ 2.00 ಲಕ್ಷ ಸಹಾಯಧನ ಹಾಗೂ 50,000/- ಸಾಲ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವುದು.
ಅರ್ಜಿಗಳನ್ನು ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿಗಳನ್ನು ದಿನಾಂಕ: 30.11.2022ರೊಳಗಾಗಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-22865522 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ದೂರವಾಣಿ ಸಂಖ್ಯೆ: 08192-230934 ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.



