Connect with us

Dvgsuddi Kannada | online news portal | Kannada news online

ದಾವಣಗೆರೆ: ಕುಶಲ ಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಕುಶಲ ಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಸ್ವಯಂ ಉದ್ಯೋಗ ಯೋಜನೆಗಳಿಗೆ ಚರ್ಮ ಕುಶಲಕರ್ಮಿಗಳಿಂದ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಕೌಶಲ್ಯ ಅಭಿವೃದ್ಧಿ ಮತ್ತು ಆದಾಯಗಳಿಕೆಗಾಗಿ ತರಬೇತಿ ಶಿಬಿರ, ವಸತಿ ಕಾರ್ಯಗಾರ ಯೋಜನೆ, ಸ್ವಾವಲಂಬಿ ಅಥವಾ ಸಂಚಾರಿ ಮಾರಾಟ ಮಳಿಗೆ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆಯಡಿ ಸಹಾಯಧನ, ಪಾದುಕೆ ಕುಟೀರ, ಚರ್ಮ ಶಿಲ್ಪ ಯಂತ್ರಾಧಾರಿತ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವ ಯೋಜನೆ, ನೇರ ಸಾಲ ಯೋಜನೆಗಳಡಿ ಸೌಲಭ್ಯಗಳನ್ನು ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 19 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಮೊ. ನಂ. 9480886279 ಮತ್ತು 7996104988 ಗೆ ಸಂಪರ್ಕಿಸಲು ಡಾ.ಬಾಬು ಜಗಜೀವನ್ ರಾಂ ಚರ್ಮ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕ ಎಂ. ಗಂಗಾಧರ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top