ದಾವಣಗೆರೆ: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ವೆಬ್‍ಸೈಟ್ https://kmdconline.karnataka.gov.in ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತವನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.



