ದಾವಣಗೆರೆ : ನ್ಯಾಮತಿ ತಾಲ್ಲೂಕಿನ ಜೀವನಹಳ್ಳಿ ಗ್ರಾಮಕ್ಕೆ ಪ್ರತ್ಯೇಕ ಗ್ರಾಮ ಪಂಚಾಯ್ತಿ ಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಚುನಾವಣೆ ಬಹಿಷ್ಕರಿಸಿದ್ದಾರೆ. ಈ ಬಗ್ಗೆ ತಾಲ್ಲೂಕು ನೂಡಲ್ ಅಧಿಕಾರಿ ರೇಷ್ಮಾ ಹಾನಗಲ್ ಗ್ರಾಮಕ್ಕೆರ ಭೇಟಿ ನೀಡಿ ಚುನಾವಣೆ ಬಹಿಷ್ಕಾರ ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು. ಆದರೆ, ಗ್ರಾಮಸ್ಥರು ಇದಕ್ಕೆ ಒಪ್ಪದ ಹಿನ್ನೆಲೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಎಸ್ ಪಿ ಹನುಮಂತರಾಯ ಗ್ರಾಮಕ್ಕೆ ಭೇಟಿ ನೀಡಿದ್ದರು.
ದೇವಸ್ಥಾನದಲ್ಲಿ ಸಭೆ ನಡೆಸಿ ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಗ್ರಾಮಸ್ಥರು ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಹೀಗಾಗಿ ಸಂಧಾನ ಸಭೆ ವಿಫಲವಾಗಿದೆ. ಜಿಲ್ಲಾಧಿಕಾರಿ ಮಂಹಂತೇಶ್ ಬೀಳಗಿ ಮಾತನಾಡಿ, ಪ್ರತ್ಯೇಕ ಗ್ರಾಮ ಪಂಚಾಯ್ತಿ ಸಮಂಜಸವಾಗಿ ಕಂಡರೂ, ಕಾನೂನು ಚೌಕಟ್ಟಿನಲ್ಲಿ ಈ ಬೇಡಿಕೆ ಈಡೇರುವುದು ಕಷ್ಟ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಂದಿಸಲಾಗುವುದು. ಸಂವಿಧಾನತ್ಮಕ ಹಕ್ಕನ್ನು ಮತದಾನ ಮಾಡುವ ಮೂಲಕ ಸದುಪಯೋಗಪಡಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಪದ್ಮಬಸವಂತಪ್ಪ, ಎಸ್.ಪಿ ಹನುಮಂತರಾಯ, ಚುನಾವಣೆ ನೂಡಲ್ ಅಧಿಕಾರಿ ರೇಷ್ಮಾ ಹಾನಗಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



