ದಾವಣಗೆರೆ; ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಆಗಸ್ಟ್ 6 ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಚಾಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆ ವಹಿಸುವರು. ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಘನ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಡಾ.ಜಿ.ಎಂ. ಸಿದ್ದೇಶ್ವರ, ವಿಧಾನಸಭಾ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಶಾಸಕ ಕೆ.ಎಸ್‍ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಹರಪನಹಳ್ಳಿ ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ವಿಧಾನ ಪರಿಷತ್ ಶಾಸಕರಾದ ಕೆ ಪಿ ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ. ತೇಜಸ್ವಿನಿ ಗೌಡ, ಎಸ್.ಎಲ್ ಭೋಜೇಗೌಡ, ವೈ.ಎ. ನಾರಾಯಣಸ್ವಾಮಿ, ಚಿದಾನಂದ್. ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್ ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಇಂಧನ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ಗೌರವ್ ಗುಪ್ತ, ಕ.ವಿ.ನಿ.ನಿ ಹಾಗೂ ಕ.ವಿ.ಪ್ರ.ನಿ.ನಿ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಪಂಕಜ್‍ಕುಮಾರ್ ಪಾಂಡೆ, ಬೆವಿಕಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಬೆವಿಕಂ, ಬೆಂಗಳೂರು ನಿರ್ದೇಶಕ ದರ್ಶನ್.ಜೆ ಮತ್ತು ತಾಂತ್ರಿಕ ನಿರ್ದೇಶಕ ರಮೇಶ್ ಎಚ್.ಜೆ,ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್. ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಭಾಗಿಯಾಗುವರು.



