ದಾವಣಗೆರೆ: ಗ್ಯಾರಂಟಿ ಯೋಜನೆಗಳ (Guarantee Scheme) ಅನುಷ್ಠಾನದಲ್ಲಿ ಕಾಲಕಾಲಕ್ಕೆ ಇ-ಜನ್ಮ ತಂತ್ರಾಂಶದಲ್ಲಿ ಮರಣ ಹೊಂದಿದ ಫಲಾನುಭವಿಗಳ ವಿವರ ಪರೀಕ್ಷಿಸಿಕೊಳ್ಳಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿವೆ. ಸಾರ್ವಜನಿಕರು ಊಹಾಪೋಹಗಳಿಗೆ ಕಿವಿಗೊಡಬಾರದು.
ಡಿಸೆಂಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಈಗಾಗಲೇ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಜನವರಿ ತಿಂಗಳಿನ ಗೃಹಲಕ್ಷ್ಮಿ ಹಣ ಪಾವತಿ ಹಂತದಲ್ಲಿದೆ. ನಂತರದ ಬಾಕಿ ಹಣವನ್ನು ಕೂಡ ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗಲಿದ್ದು, ಫೆಬ್ರವರಿ ತಿಂಗಳ ಹಣವೂ ಬಿಡುಗಡೆಯಾಗಲಿದೆ. ಆದ್ದರಿಂದ ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಅನ್ನಭಾಗ್ಯ: ಯೋಜನೆಯಡಿ ಪಡಿತರ ಚೀಟಿದಾರರಿಗೆ ಇನ್ನು ಮುಂದೆ ನಗದು ಬದಲಿಗೆ 5 ಕೆ.ಜಿ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫೆಬ್ರವರಿಯಿಂದಲೇ ಜಾರಿಗೆ ಬಂದಿದೆ. ಮಾರ್ಚ್ ತಿಂಗಳಿನಲ್ಲಿ ಒಟ್ಟು 15 ಕೆ.ಜಿ. ಅಕ್ಕಿ ಅನ್ನಭಾಗ್ಯ ಯೋಜನೆಯ ಪ್ರತಿ ಫಲಾನುಭವಿಗಳಿಗೆ ದೊರೆಯಲಿದೆ ಎಂದು ತಿಳಿಸಿದರು.
ದಾವಣಗೆರೆ: ಕೊಂಡಜ್ಜಿ ಸುತ್ತಮುತ್ತ ವರ್ಷದ ಮೊದಲ ಮಳೆ; ಅರ್ಧ ಗಂಟೆಗೂ ಹೆಚ್ಚು ಹೊತ್ತು ಗುಡುಗು-ಸಿಡಿಲು ಸಹಿತ ಮಳೆ
ಜುಲೈ-23 ರಿಂದ ಡಿಸೆಂಬರ್-24 ಅಂತ್ಯದವರೆಗೆ 344950 ಕಾರ್ಡ್ದಾರರಲ್ಲಿನ 1242812 ಸದಸ್ಯರಿಗೆ ಯೋಜನೆ ಆರಂಭವಾದಾಗಿನಿAದ ರೂ.346.33 ಕೋಟಿಯನ್ನು ಡಿಬಿಟಿ ಮೂಲಕ ಅವರ ಖಾತೆಗೆ ವರ್ಗಾಯಿಸಲಾಗಿದೆ.
ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ನೀಡುತ್ತಿದ್ದು ಆಗಸ್ಟ್-23 ರಿಂದ ಡಿಸೆಂಬರ್-24 ಅಂತ್ಯದವರೆಗೆ ನೋಂದಣಿಯಾದ 371512 ಫಲಾನುಭವಿಗಳಿದ್ದು 359601 ಮಹಿಳೆಯರಿಗೆ ರೂ.1135.27 ಕೋಟಿ ಹಣ ಡಿಬಿಟಿ ಮೂಲಕ ಸಂದಾಯ ಮಾಡಲಾಗಿದೆ.
ದಾವಣಗೆರೆ ಸೇರಿ ಐದು ಮಹಾನಗರ ಪಾಲಿಕೆಗಳಿಗೆ ಶೀಘ್ರದಲ್ಲಿ ಚುನಾವಣೆ; ಆಯುಕ್ತ ಸಂಗ್ರೇಶಿ
ಗೃಹಜ್ಯೋತಿ; ದಾವಣಗೆರೆ ವಿಭಾಗದಿಂದ ಒಟ್ಟು 561066 ವಿದ್ಯುತ್ ಸಂಪರ್ಕ ಪಡೆದ ಆರ್.ಆರ್.ಸಂಖ್ಯೆಗಳಿದ್ದು ಇದರಲ್ಲಿ 498411 ಆರ್.ಆರ್.ಸಂಖ್ಯೆಯ ಫಲಾನುಭವಿಗಳು ಗೃಹಜ್ಯೋತಿಯಡಿ ನೊಂದಣಿಯಾಗಿವೆ. ಇದರ ವೆಚ್ಚವಾಗಿ ಫೆಬ್ರವರಿ-2025 ತಿಂಗಳಲ್ಲಿ ರೂ.21.32 ಕೋಟಿ ವೆಚ್ಚವನ್ನು ಹೊಂದಾಣಿಕೆ ಮಾಡಲಾಗಿದೆ.
ಶಕ್ತಿ ಯೋಜನೆ; ಶಕ್ತಿ ಯೋಜನೆಯಡಿ ದಾವಣಗೆರೆ ವಿಭಾಗದ ವ್ಯಾಪ್ತಿಯಲ್ಲಿ ಜೂನ್-23 ರಿಂದ ಫೆಬ್ರವರಿ-25 ಅಂತ್ಯದವರೆಗೆ 76120815 ಟ್ರಿಪ್‌ಗಳಲ್ಲಿ ಮಹಿಳೆಯರು ಪ್ರಯಾಣಿಸಿದ್ದು ಇದರ ವೆಚ್ಚವಾಗಿ ರೂ.215 ಕೋಟಿ ರೂ.ಗಳನ್ನು ಸರ್ಕಾರದಿಂದ ಭರಿಸಲಾಗಿದೆ.
ಯುವನಿಧಿ ಯೋಜನೆಯಡಿ ಪದವಿ ಉತ್ತೀರ್ಣರಾದ ಹಾಗೂ ಡಿಪ್ಲೊಮಾ ಪಾಸಾದವರಿಗೆ ಶಿಷ್ಯವೇತನವಾಗಿ ಪ್ರತಿ ತಿಂಗಳು ಪದವೀಧರರಿಗೆ ರೂ.3000 ಮತ್ತು ಡಿಪ್ಲೊಮಾದಾರರಿಗೆ ರೂ.1500 ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಜನವರಿ-2024 ರಿಂದ ಫೆಬ್ರವರಿ-2025 ರವರೆಗೆ 6458 ಪದವೀಧರರು ಹಾಗೂ 125 ಡಿಪ್ಲೊಮೋದಾರರು ಸೇರಿ 6583 ಅಭ್ಯರ್ಥಿಗಳಿಗೆ ರೂ.12.66 ಕೋಟಿಗಳನ್ನು ಶಿಷ್ಯವೇತನವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ.
ಸರ್ಕಾರದಿಂದ ಅನುಷ್ಟಾನಿತ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಿಗಬೇಕು. ಯೋಜನೆಗಳ ಸೌಲಭ್ಯದ ದುರುಪಯೋಗವಾಗದಂತೆ ನಿಗಾ ವಹಿಸಬೇಕು. ನಗರದ 36ನೇ ವಾರ್ಡಿನ ಶಿವಕುಮಾರ ಬಡಾವಣೆಗೆ ನಗರ ಸಾರಿಗೆ ಸಂಪರ್ಕ ಇಲ್ಲವಾದ್ದರಿಂದ ಸಾರ್ವಜನಿಕರಿಗೆ, ಹಿರಿಯ ನಾಗರೀಕರಿಗೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಈ ಮಾರ್ಗಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಹಾಗೆಯೇ ಹರಿಹರ ತಾಲ್ಲೂಕಿನ ಮಹದೇವಪುರ ಗ್ರಾಮಕ್ಕೆ ಕೇವಲ ಒಂದು ಬಸ್ ಸಂಚರಿಸುತ್ತಿದ್ದು, ಅದೂ ಕೂಡ ಸರಿಯಾದ ಸಮಯಕ್ಕೆ ಬಾರದೇ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಪರ್ಯಾಯವಾಗಿ ಇನ್ನೊಂದು ಹೆಚ್ಚುವರಿ ಬಸ್ ವ್ಯವಸ್ಥೆಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾಗಳಿಗೆ ತಿಳಿಸಿದಾಗ, ಇದಕ್ಕೆ ಪ್ರತಿಕ್ರಿಯಿಸಿ ಅತೀ ಶಿಘ್ರದಲ್ಲೇ ಕ್ರಮ ಕೈಗೊಂಡು ಸಾರಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಮಂಜುನಾಥ, ನಂಜಾನಾಯ್ಕ, ರಾಜೇಶ್ವರಿ, ಶ್ರೀನಿವಾಸ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.