Connect with us

Dvgsuddi Kannada | online news portal | Kannada news online

ದಾವಣಗೆರೆ: ಗಿನ್ನಿಸ್ ವಿಶ್ವ ದಾಖಲೆ ಯೋಗಥಾನ್ ಗೆ ವಚನಾನಂದ ಶ್ರೀ ಚಾಲನೆ

IMG 20230115 195303

ದಾವಣಗೆರೆ

ದಾವಣಗೆರೆ: ಗಿನ್ನಿಸ್ ವಿಶ್ವ ದಾಖಲೆ ಯೋಗಥಾನ್ ಗೆ ವಚನಾನಂದ ಶ್ರೀ ಚಾಲನೆ

ದಾವಣಗೆರೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಿನ್ನಿಸ್ ವಿಶ್ವ ದಾಖಲೆಯ ಯೋಗಥಾನ್​ಗೆ ಪಂಚಮಸಾಲಿ ಗುರುಪೀಠದ ಶ್ವಾಸಗುರು ವಚನಾನಂದ ಸ್ವಾಮೀಜಿ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಟಿ.ವಿ, ಜಿಲ್ಲಾ ಯೋಗ ಒಕ್ಕೂಟ, ದಾವಣಗೆರೆ ಇವರ ಸಹಯೋಗದೊಂದಿಗೆ ಇಂದು ಬೆಳಿಗ್ಗೆ 6 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗಥಾನ್ ಗಿನ್ನಿಸ್ ವಿಶ್ವದಾಖಲೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

45 ನಿಮಿಷ ನಿರಂತರವಾಗಿ ನಡೆದ ಯೋಗಾಥಾನ್​ನಲ್ಲಿ ವಿವಿಧ ಶಾಲಾ ಕಾಲೇಜ್​ಗಳ ವಿದ್ಯಾರ್ಥಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಸೇರಿ 8 ಸಾವಿರ ಜನರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಎಸ್ ಪಿ ಸಿ ಬಿ ರಿಷ್ಯಂತ್ , ಜಿಲ್ಲಾ ಕಾರ್ಯ ನಿರ್ವಹಣಾ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ವಿಧ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top