ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಾಗೇವಾಡಿಯ ತುಂಗಭದ್ರಾ ನದಿಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ನದಿ ಪಾತ್ರದಲ್ಲಿ ದನ ಮೇಯಿಸಲು ಹೋದ ಕೆಲವರಿಗೆ ಮೊಸಳೆ ಕಾಣಿಸಿಕೊಂಡಿದ್ದು, ಬಾಗೇವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ನದಿ ಪಾತ್ರದಲ್ಲಿ ಬಟ್ಟೆ ತೊಳೆಯಲು, ಸ್ನಾನ ಮಾಡಲು, ಜಾನುವಾರು ಮೇಯಿಸಲು ಹೋಗುವ ಜನರು ಎಚ್ಚರಿಕೆ ವಹಿಸಬೇಕಿದೆ.



