ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ನ.19 ರಂದು ಮಧ್ಯಾಹ್ನ 01 ಘಂಟೆಗೆ ಉಚ್ಚoಗೇಮ್ಮನಿಗೆ ಹರಕೆ ರೂಪದಲ್ಲಿ ಸಲ್ಲಿಸಿದ ವಿವಿಧ ಗುಣಮಟ್ಟದ ಸೀರೆಗಳ ಹರಾಜು ಪ್ರಕ್ರಿಯೆ ನಡೆಯಲಿದೆ.
ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರ) ಎಂ.ಎಚ್. ಪ್ರಕಾಶ್ ರಾವ್ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಈ ಹರಾಜು ಪ್ರಕ್ರಿಯೆ ನಡೆಯಲಿದ್ದು ಈ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರೂ 50,000 ರೂ.ಠೇವಣಿಯನ್ನು ದೇವಸ್ಥಾನದ ಕಚೇರಿಯಲ್ಲಿ ಹರಾಜು ಪ್ರಕ್ರಿಯೆ ಪ್ರಾರಂಭವಾಗುವ ಮುಂಚೆ ಕಟ್ಟಬೇಕು. ಹರಾಜಿನಲ್ಲಿ ಪಡೆದ ಸಾಮಗ್ರಿಗಳಿಗೆ ಆ ದಿನವೇ ಹಣವನ್ನು ಪಾವತಿಸಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಎಚ್ ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



