ವಿಜಯನಗರ; ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗಿತು.
ಗ್ರಾಮದ ಹೊರಗಡೆ ಇರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಹತ್ತಿರ ವೀರರಾಣಿ ಕಿತ್ತೂರು ಚೆನ್ನಮ್ಮ ಫೋಟೋ ಪೂಜೆಯನ್ನು ಮಾಡಿ, ಟ್ರ್ಯಾಕ್ಟರ್ ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಫೋಟೋ ಇಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಅದ್ಧೂರಿಯಾಗಿ ಜಯಂತಿ ಆಚರಿಸಲಾಗಿತು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಗ್ರಾಮ ಘಟಕ,ಯುವ ಘಟಕ ,ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.



