Connect with us

Dvgsuddi Kannada | online news portal | Kannada news online

ಹರಪನಹಳ್ಳಿ: ಗಂಡನ ಮನೆಯಿಂದ ದುಗ್ಗಮ್ಮ ಜಾತ್ರೆಗೆ ಬಂದಿದವಳನ್ನು ಭೀಕರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪಾಗಲ್ ಪ್ರೇಮಿ…!

ಹರಪನಹಳ್ಳಿ

ಹರಪನಹಳ್ಳಿ: ಗಂಡನ ಮನೆಯಿಂದ ದುಗ್ಗಮ್ಮ ಜಾತ್ರೆಗೆ ಬಂದಿದವಳನ್ನು ಭೀಕರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪಾಗಲ್ ಪ್ರೇಮಿ…!

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿಯ ದುಗ್ಗಮ್ಮದೇವಿ ಜಾತ್ರೆಯಲ್ಲಿ ಪ್ರಿಯಕರನೊಬ್ಬ ಗಂಡನ ಮನೆಯಿಂದ ಜಾತ್ರೆಗೆ ತನ್ನ ಪ್ರೇಮಿಯನ್ನು ಚಾಕುವಿನಿಂದ ಭೀಕರವಾಗಿ ಇರಿದು ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರೀತಿಸಿದವಳು ಸಿಗದಕ್ಕೆ ಆಕೆಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಮೂಕಪ್ಪನವರ ಹನುಮಂತ ಎಂಬಾತ ಪ್ರತಿಭಾ ನಾಗರಾಜ್ (25) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಮೂಕಪ್ಪನವರ ಹನುಮಂತನ ಎಂಬಾತ ಪ್ರತಿಭಾಳನ್ನ ಪ್ರೀತಿಸುವುದಾಗಿ ಹೇಳಿಕೊಂಡು ಗ್ರಾಮದಲ್ಲಿ ಸುತ್ತುತ್ತಿದ್ದನು. ಪ್ರತಿಭಾಳನ್ನ ರಾಣೆಬೆನ್ನೂರಿನ‌ ನಾಗರಾಜ್ ಎಂಬುವವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಪ್ರತಿಭಾಗೆ ಒಂದು ಗಂಡು ಮಗು ಸಹ‌ ಇದೆ.

ಮದುವೆ ಬಳಿಕ ಚೆನ್ನಾಗಿ ಜೀವನ ನಡೆಸುತ್ತಿದ್ದ ಪ್ರತಿಭಾ, ಚಿಕ್ಕಮ್ಮನ ಊರಿಗೆ ಜಾತ್ರೆಗೆ ಬಂದಿದ್ದಳು. ಜಾತ್ರೆ ಬಂದ ವಿಷಯ‌ ತಿಳಿದ ಪಾಗಲ್ ಪ್ರೇಮಿ ಹನುಮಂತ ಆಕೆಯನ್ನ ನಡು ರಸ್ತೆಯಲ್ಲಿ ಮನ ಬಂದಂತೆ ದೇಹದ ಬಹುತೇಕ‌ ಭಾಗಳಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರಗಾಯಗೊಂಡಿದ್ದ ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡುವ ಮಾರ್ಗಮಧ್ಯಯೇ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಈ ಕುರಿತು ಹಲವಾಗಲು‌ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಆರೋಪಿ ಮೂಕಪ್ಪನವರ ಹನುಮಂತನನ್ನು ಬಂಧಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

Advertisement

ದಾವಣಗೆರೆ

Advertisement
To Top