ಉಚ್ಚಂಗಿದುರ್ಗ: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಪ್ರತಿವರ್ಷ ನಡೆಯುವ ಭರತ ಹುಣ್ಣಿಮೆಗೆ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆಯಿದ್ದು, ಇಂದು ಉಪವಿಭಾಗಾಧಿಕಾರಿ ಹೆಚ್. ಜಿ. ಚಂದ್ರಶೇಖರಯ್ಯ ಭೇಟಿ ನೀಡಿ ಪರಿಶೀಲಿಸಿದರು.
ಶ್ರೀಕ್ಷೇತ್ರಕ್ಕೆ ಬರುವ ಭಕ್ತರಿಗೆ ಮೂಲಸೌಕರ್ಯಗಳ ಕೊರತೆಯಾಗದಂತೆ ಕೈ ಗೊಳ್ಳುವ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಈ ವೇಳೆ ಹರಪನಹಳ್ಳಿ ವೃತ್ತ ನಿರೀಕ್ಷಕ ನಾಗರಾಜ್ ಕಮ್ಮಾರ್ ,ಅರಸೀಕೆರೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕಿರಣ್ ಕುಮಾರ್ ಇದ್ದರು.



