ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದ ಹರಪನಹಳ್ಳಿ ರಸ್ತೆಯ ಎಕೆ ಕಾಲೋನಿ ಬಳಿ ಟಿಪ್ಪರ್ ಲಾರಿ ಪಾದಚಾರಿ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮಣ್ಣು ತುಂಬಿದ ಲಾರಿ, ರಸ್ತೆ ದಾಟುತ್ತಿದ್ದ ಎಕೆ ಕಾಲೋನಿ ನಿವಾಸಿ ಕಂಡಕ್ಟರ್ ವಿನಾಯಕ (45) ಮೇಲೆ ಹರಿದಿದೆ. ಬೃಹತ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪಾದಚಾರಿ ಸಾವನ್ನಪ್ಪಿದ್ದಾನೆ. ಕೂಡಲೇ ಸ್ಥಳಕ್ಕೆ ಹರಿಹರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.