ದಾವಣಗೆರೆ; ಜಿಲ್ಲೆಯ ಹರಿಹರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿಗೆ ಬೃಹತ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹರಿಹರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಬೃಹತ್ ಲಾರಿ, ದಾವಣಗೆರೆ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಹೆದ್ದಾರಿಯಿಂದ ಹರಹರ ಕಡೆ ಹೋಗಲು ರಸ್ತೆ ಕ್ರಾಸ್ ಮಾಡುವಾಗ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕನಿಗೆ ತೀವ್ರ ಗಾಯವಾಗಿದ್ದು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



