ದಾವಣಗೆರೆ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅ. 02 ಮಹಾತ್ಮ ಗಾಂಧಿ ಜಯಂತಿಯಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಹರಿಹರ ಸರ್ಕಲ್ ನಲ್ಲಿ ಬೆಳಗ್ಗೆ 9 ಗಂಟೆಗೆ ಸಾಂಕೇತಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಈ ಸತ್ಯಗ್ರಾಹಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಶಾಸಕ ಎಸ್. ರಾಮಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ, ಶಾಸಕಿ ಸೌಮ್ಯ ರೆಡ್ಡಿ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಆರ್ ಕೊಂಡಜ್ಜಿ ತಿಳಿಸಿದ್ದಾರೆ.



